ಕೇಂದ್ರ ಸರ್ಕಾರ ಪರ ಮಾತನಾಡಿದ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಗರಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಭಾರತ- ಪಾಕ್ ಸಂಘರ್ಷದ ಕುರಿತು ಮೋದಿ ಸರ್ಕಾರದ ಕ್ರಮಗಳನ್ನು ಶ್ಲಾಘಿಸುತ್ತಿರುವುದು ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ಸ್ವಪಕ್ಷದವರು ಅಸಮಾಧಾನಗೊಂಡಿದ್ದಾರೆ.

ಶಶಿ ತರೂರ್ ಅವರು ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು ಪದೇ ಪದೇ ಹೇಳಿಕೆ ನೀಡುವ ಮೂಲಕ ‘ಲಕ್ಷ್ಮಣ ರೇಖೆ’ಯನ್ನು ಮೀರಿದ್ದಾರೆ ಎಂದು ಪಕ್ಷದ ಮೂಲಗಳು ಬುಧವಾರ ತಿಳಿಸಿವೆ.

ದೆಹಲಿಯ 24, ಅಕ್ಬರ್ ರಸ್ತೆಯ ಕಚೇರಿಯಲ್ಲಿ ತರೂರ್, ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸಚಿನ್ ಪೈಲಟ್ ಸೇರಿದಂತೆ ಹಿರಿಯ ನಾಯಕರ ಸಭೆ ನಡೆಸಿದ್ದು, ಈ ವೇಳೆ ನಮ್ಮದು ಪ್ರಜಾಸತ್ತಾತ್ಮಕ ಪಕ್ಷ ಮತ್ತು ಜನರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ, ಆದರೆ ಈ ಬಾರಿ ತರೂರ್ ಲಕ್ಷ್ಮಣ ರೇಖೆಯನ್ನು ಮೀರಿದ್ದಾರೆಎಂದು ಪಕ್ಷದ ಕೆಲ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ವೈಯಕ್ತಿಕ ಅಭಿಪ್ರಾಯಗಳನ್ನು ಪ್ರಸಾರ ಮಾಡುವ ಸಮಯವಲ್ಲ, ಬದಲಾಗಿ ಪಕ್ಷದ ನಿಲುವನ್ನು ವರ್ಧಿಸುವ ಸಮಯ ಎಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ಹೇಳಿದ್ದಾರೆ.

ತರೂರ್ ಅವರ ಹೇಳಿಕೆಗಳು ಪಕ್ಷದ ನಿಲುವಿಗೆ ವಿರುದ್ಧವಾಗಿವೆಯೇ ಎಂಬ ಪ್ರಶ್ನೆಗೆ, ರಮೇಶ್ ಮಾಧ್ಯಮಗೋಷ್ಠಿಯಲ್ಲಿ,’ಅದು ಅವರ ಅಭಿಪ್ರಾಯ. ತರೂರ್ ಮಾತನಾಡುವಾಗ, ಅದು ಪಕ್ಷದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ’ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!