ಹೊಸದಿಗಂತ ಡಿಜಿಟಲ್ ಡೆಸ್ಕ್;
ಚಿಕ್ಕಬಳ್ಳಾಪುರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅಶ್ಲೀಲವಾಗಿ ನಿಂದಿಸಿ, ಧಮ್ಕಿ ಹಾಕಿದ ಪ್ರಕರಣ ಸಂಬಂಧ ರಾಜ್ಯ ಮಹಿಳಾ ಆಯೋಗ ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ.
ಈ ಕುರಿತಂತೆ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮೀ ಚೌಧರಿ ಅವರು ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ. ಘಟನೆಯ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಂಡು ವರದಿ ನೀಡಲು ಸೂಚನೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬ್ಯಾನರ್ ತೆರವುಗೊಳಿಸೋ ವಿಚಾರಕ್ಕಾಗಿ ಕಾಂಗ್ರೆಸ್ ಮುಖಂಡರೊಬ್ಬರು ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದರು. ಈ ಆಡಿಯೋ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಪೊಲೀಸರಿಗೆ ದೂರು ನೀಡಿದ್ದಾರೆ.


