ಮೋದಿ ಸರ್ಕಾರ ಉರುಳಿಸಲು ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಸಂಚು: ಎಸ್‌ಐಟಿ ಸ್ಫೋಟಕ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ.
ಯೋಜಿತ ರೀತಿಯಲ್ಲಿ ಗುಜರಾತ್‌ಗೆ ಮಾನಹಾನಿ ಮಾಡುವ ಪ್ರಯತ್ನ ನಡೆದಿದೆ. ಇದರ ಹಿಂದೆ ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಕೈವಾಡವಿದೆ ಜೊತೆಗೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದೆ.
2002ರ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಜಾಮೀನು ನೀಡದಂತೆ ಗುಜರಾತ್ ಪೊಲೀಸರು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಬಿಜೆಪಿ ಸರ್ಕಾರವನ್ನು ಉರುಳಿಸುವ ದೊಡ್ಡ ಪಿತೂರಿಯಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.
2002ರ ಗಲಭೆಯ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಉರುಳಿಸಲು ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಸೂಚನೆಯ ಮೇರೆಗೆ ಸೆಟಲ್ವಾಡ್ ಪಿತೂರಿ ನಡೆಸಿದ್ದರು ಎಂದು ಗುಜರಾತ್ ಪೊಲೀಸರ ವಿಶೇಷ ತನಿಖಾ ತಂಡವು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಹೇಳಿಕೊಂಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿಡಿ ಠಕ್ಕರ್ ಅವರು ಎಸ್‌ಐಟಿ ಪ್ರತಿಕ್ರಿಯೆಯನ್ನು ದಾಖಲಿಸಿಕೊಂಡು ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!