ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್‌ ನಾಯಕ ಅಜಯ್‌ ಕಪೂರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶ ಕಾಂಗ್ರೆಸ್‌ ನಾಯಕ ಅಜಯ್‌ ಕಪೂರ್‌ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬಳಿಕ ಮಾತನಾಡಿದ ಅಜಯ್‌ ಕಪೂರ್‌, ಕಾಂಗ್ರೆಸ್‌ ಪಕ್ಷದಲ್ಲಿದ್ದ 37 ವರ್ಷಗಳ ಕಾಲ ಅತ್ಯಂತ ಪ್ರಾಮಾಣಿಕನಾಗಿ ಕೆಲಸ ಮಾಡಿದ್ದೇನೆ ಎಂದರು.

ಮೋದಿಯವರನ್ನು ‘ಯುಗಪುರಷ’ ಎಂದು ಬಣ್ಣಿಸಿದ ಅಜಯ್‌, ದೇಶದ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಪ್ರಧಾನಿ ನರೇಂದ್ರ ಮೋದಿಯವರ ಕುಟುಂಬಕ್ಕೆ ಸೇರಬೇಕು ಎಂದು ಕರೆ ನೀಡಿದ್ದಾರೆ.

ಇಂದು ನನ್ನ ಹೊಸ ಜೀವನ ಆರಂಭವಾಗಿದೆ. ಮುಂದಿನ ರಾಜಕೀಯ ಜೀವನದಲ್ಲಿ ಬಿಜೆಪಿಯ ನಾಯಕತ್ವ ಮತ್ತು ಮಾರ್ಗದರ್ಶನದೊಂದಿಗೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಅಜಯ್‌ ಕಪೂರ್‌ ಉತ್ತರ ಪ್ರದೇಶದ ಗೋವಿಂದನಗರ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕರಾಗಿದ್ದಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!