ಕಾಂಗ್ರೆಸ್ ಮುಖಂಡ ಬಿ.ಕೆ ಅಲ್ತಾಫ್ ಖಾನ್ ಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ನಿಗಮ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್​ರಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಬಿ.ಕೆ.ಅಲ್ತಾಫ್ ಖಾನ್ ಜೆ.ಜೆ.ನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

“ಪಿಎಫ್​ಐ ಸಂಘಟನೆಯವರೊಂದಿಗೆ ಆಟವಾಡಬೇಡ, ಆರ್​ಎಸ್​ಎಸ್​ ಏಜೆಂಟ್​ ಆಗಿ ಕೆಲಸ ಮಾಡಬೇಡ. ನಾಳೆ ನಿನ್ನ ಮಗಳ ಮದುವೆ ಇದೆ. ನಮ್ಮಿಂದ ನೀನು ಹಲವು ಬಾರಿ ಬಚಾವ್​ ಆಗಿದ್ದೀಯಾ. ಇನ್ಮುಂದೆ ನೀನು ಬಚಾವ್​ ಆಗಲು ಆಗಲ್ಲ. ನಿನ್ನ ತಮ್ಮಂದಿರನ್ನು ನೀನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ನಿನ್ನ ಮತ್ತು ನಿನ್ನ ಕುಟುಂಬದವರನ್ನು ಜೀವ ಸಹಿತ ಬಿಡುವುದಿಲ್ಲ. ನೀನು ನ್ಯಾಯಾಲಯದಲ್ಲಿ ಕೇಸ್​ಗೆ ಸಾಕ್ಷಿ ಹೇಳಲು ಹೋಗಬಾರದು. ಹೋದರೇ ನೀನಿ ಉಳಿಯುವುದಿಲ್ಲ. ಆರ್​ಎಸ್​ಎಸ್​ಗೆ ಚಮಚಗಿರಿ ಮಾಡಿದರೆ ಪಿಎಫ್​​ಐ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾರೆ.

ಸದ್ಯ ಪ್ರಕರಣ ಜೆಜೆ ನಗರ ಠಾಣೆಯಿಂದ ಸಿಸಿಬಿಗೆ ವರ್ಗಾವಣೆವಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!