ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗ ಜಿಲ್ಲೆಯ ಕಾಂಗ್ರೆಸ್ ಮುಖಂಡ, ವೈದ್ಯ ಶಶಿಧರ್ ಹಟ್ಟಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸೋಮವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಶಶಿಧರ್ ಹಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಬರೆದು ಅದರಲ್ಲಿ ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶರಣಗೌಡ ನನಗೆ ಬಹಳ ಕಿರುಕುಳ ನೀಡುತ್ತಿದ್ದರು. ಹೀಗಾಗಿ ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪತ್ರದಲ್ಲಿ ವೈದ್ಯ ಶಶಿಧರ್ ಹಟ್ಟಿ ಬರೆದಿದ್ದಾರೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.