ಹೊಸದಿಗಂತ ಡಿಜಿಟಲ್ ಡೆಸ್ಕ್
ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಇವಿಕೆಎಸ್ ಇಳಂಗೋವನ್ ಅವರು ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ .
ಈರೋಡ್ ಪೂರ್ವ ಕ್ಷೇತ್ರದ ಶಾಸಕರಾಗಿದ್ದ 75 ವರ್ಷದ ಇಳಂಗೋವನ್ ಅವರು ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ನವೆಂಬರ್ 11 ರಂದು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯಕೀಯ ಸಿಬ್ಬಂದಿಯ ಪ್ರಯತ್ನದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.