ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.
ಬುಧವಾರ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಮಂಗಳೂರು ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.
ಮನೆಯ ಕಿಟಕಿಯ ಫ್ರೇಮ್‌ಗೆ ಕಲ್ಲು ಬಿದ್ದಿದ್ದು, ಯಾವುದೇ ಹಾನಿಯಾಗಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ.