ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಮತ ಚಲಾವಣೆ: 39 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ನಡೆಯಲಿದೆ.

ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಮತ ಚಲಾವಣೆ. ಮತ ಚಲಾಯಿಸಿದ ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗಿದ್ದಕ್ಕೆ ನನಗೆ ತುಂಬಾ ಸಂತೋಷ ಮತ್ತು ಹೆಮ್ಮೆ ಇದೆ. ತಮಿಳುನಾಡಿಗೆ ಸಂಬಂಧಿಸಿದಂತೆ, ನನಗೆ ಸಂಪೂರ್ಣ ವಿಶ್ವಾಸವಿದೆ.

I.N.D.I.A ಮೈತ್ರಿಕೂಟವು ತಮಿಳುನಾಡಿನ ಎಲ್ಲಾ 39 ಸಂಸದೀಯ ಸ್ಥಾನಗಳನ್ನು ಗೆಲ್ಲುತ್ತದೆ. ಇದು ಮೊದಲ ಹಂತದ ಚುನಾವಣೆಯಾಗಿದೆ, ಏಳು ಹಂತಗಳಿವೆ. ನಾವು ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!