Wednesday, February 1, 2023

Latest Posts

ನಾಳೆ ರಾಜ್ಯ ರಾಜಕಾರಣದತ್ತ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಭರದ ರಣತಂತ್ರ ರೂಪಿಸಲಾಗುತ್ತಿದ್ದು, ಎಲ್ಲಾ ಪಕ್ಷಗಳು ಮತ್ತೆ ಅದಿಕಾರಕ್ಕೇರಲು ತಯಾರಿ ನಡೆಸುಲಾಗುತ್ತಿದೆ.

ಇದರ ನಡುವೆ ಇದೀಗ ನಾಳೆ ಕಾಂಗ್ರೆಸ್‌ (Congress) ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ರಾಹುಲ್ ಗಾಂಧಿಯವರ(Rahul Gandhi) “ಭಾರತ್ ಜೋಡೋ ಯಾತ್ರೆ”ಯ ಸಂದೇಶವನ್ನು ದೃಢಪಡಿಸುವ ಉದ್ದೇಶದಿಂದ ಪ್ರಿಯಾಂಕಾ “ಹಾತ್ ಸೆ ಹಾತ್ ಜೋಡೋ” ಮೆಗಾ ಸಮಾವೇಶದಲ್ಲಿ ಮಹಿಳಾ ಕೇಂದ್ರಿತ ಭರವಸೆಯನ್ನು ಘೋಷಿಸಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.

ಸುಮಾರು 15,000 ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.ರಾಜ್ಯದಲ್ಲಿ ಮಹಿಳೆಯರನ್ನು ಕೇಂದ್ರೀಕರಿಸಿ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!