ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಆಪ್ತ ತೇಜಿಂದರ್‌ ಸಿಂಗ್‌ ಬಿಟ್ಟೂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಎಐಸಿಸಿ ಹಿಮಾಚಲ ಪ್ರದೇಶ ಉಸ್ತುವಾರಿ ಕಾರ್ಯದರ್ಶಿ ತೇಜಿಂದರ್‌ ಸಿಂಗ್‌ ಬಿಟ್ಟೂ ಅವರು ಶನಿವಾರ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಆಪ್ತರಾಗಿದ್ದ ಬಿಟ್ಟೂ ಜೊತೆ ಕಾಂಗ್ರೆಸ್‌ನ ಮಾಜಿ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಪತ್ನಿ ಕರಮ್‌ಜೀತ್ ಕೌರ್‌ ಚೌಧರಿ ಅವರೂ ಬಿಜೆಪಿಗೆ ಸೇರ್ಪಡೆಗೊಂಡರು.

ಕಳೆದ ವರ್ಷ ಸಂತೋಖ್ ಸಿಂಗ್ ಅವರ ನಿಧನದ ಬಳಿಕ ಜಲಂಧರ್‌ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕರಮ್‌ಜೀತ್ ಅವರು ಎಎಪಿ ಅಭ್ಯರ್ಥಿ ಸುಶೀಲ್‌ ಕುಮಾರ್‌ ರಿಂಕು ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದರು.

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಅವರು ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!