ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸೇನೆಯ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ ಜಾಮೀನು ನೀಡಿದೆ.
ಹೆಚ್ಚುವರಿ ಸಿಜೆಎಂ ಅಲೋಕ್ ವರ್ಮಾ ನೇತೃತ್ವದ ಸಂಸದ-ಶಾಸಕ ನ್ಯಾಯಾಲಯವು ತಲಾ 20,000 ರೂ.ಗಳ ಎರಡು ಬಾಂಡ್‌ಗಳನ್ನು ಒದಗಿಸುವ ಮೂಲಕ ರಾಹುಲ್ ಗಾಂಧಿ ಅವರಿಗೆ ರಿಲೀಫ್ ನೀಡಿದೆ.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೈನಿಕರ ವಿರುದ್ಧ ರಾಹುಲ್ ಗಾಂಧಿ ನೀಡಿದ ಅವಹೇಳನಕಾರಿ ಹೇಳಿಕೆಗಳ ಕಾರಣದಿಂದ ಈ ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯದ ಸಮನ್ಸ್ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಲಕ್ನೋದಲ್ಲಿರುವ ಸಂಸದರು ಮತ್ತು ಶಾಸಕರ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಇಂದು ಹಾಜರಾದರು.