ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಗೆ ಅನಾರೋಗ್ಯವಾಗಿದ್ದು, ಈ ಹಿನ್ನೆಲೆ ಇಂದು (ಭಾನುವಾರ) ಮಧ್ಯಪ್ರದೇಶ ಮತ್ತು ಜಾರ್ಖಂಡ್ನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಗೆ ಗೈರಾಗಿದ್ದಾರೆ.
ಮಧ್ಯಪ್ರದೇಶದ ಸತ್ನಾ ಮತ್ತು ಜಾರ್ಖಂಡ್ನ ರಾಂಚಿಯಲ್ಲಿ ವಿಪಕ್ಷಗಳ ಮೈತ್ರಿಕೂಟದ ಮೆಗಾ ರ್ಯಾಲಿಯಲ್ಲಿ ಭಾಗವಹಿಸಿ ರಾಹುಲ್ ಗಾಂಧಿ ಪ್ರಚಾರ ನಡೆಸಬೇಕಿತ್ತು. ಆದರೆ ಅನಾರೋಗ್ಯದಿಂದ ಗೈರಾಗಿದ್ದಾರೆ ಎಂದು ಕಾಂಗ್ರೆಸ್ನ (Congress) ಜೈರಾಮ್ ರಮೇಶ್ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ದೆಹಲಿಯಿಂದ ಹೊರಡಲು ಸಾಧ್ಯವಾಗಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸತ್ನಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ನಂತರ ರಾಂಚಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಎಕ್ಸ್ ಖಾತೆಯಲ್ಲಿ ಜೈರಾಮ್ ರಮೇಶ್ ಬರೆದುಕೊಂಡಿದ್ದಾರೆ.