ಸರ್ಕಾರಿ ಬಂಗಲೆ ತೊರೆದರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ದೆಹಲಿಯಲ್ಲಿರುವ ತಮ್ಮ ಅಧಿಕೃತ ಸರಕಾರಿ ನಿವಾಸವನ್ನು ಖಾಲಿ ಮಾಡಿದ್ದಾರೆ.

ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ಅವರು ಬೆಳಗ್ಗೆಯಿಂದ 2 ಬಾರಿ ಬಂಗಲೆಗೆ ಭೇಟಿ ನೀಡಿದ್ದಾರೆ. ನಂತರ ಮಧ್ಯಾಹ್ನದ ವೇಳೆಗೆ ರಾಹುಲ್ ಗಾಂಧಿ ಕೀಗಳನ್ನು ಹಸ್ತಾಂತರಿಸಿದ್ದಾರೆ.

2005 ರಿಂದ ರಾಹುಲ್ ಗಾಂಧಿ 12 ತುಘಲಕ್ ಲೇನ್ ಬಂಗಲೆಯಲ್ಲಿ ವಾಸಿಸುತ್ತಿದ್ದರು. ಆದರೆ ಕಳೆದ ತಿಂಗಳ ಕೊನೆಯಲ್ಲಿ ಸಂಸತ್ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹಗೊಂಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸಂಸದ ಸಿ.ಆರ್. ಪಾಟೀಲ್ ನೇತೃತ್ವದ ಲೋಕಸಭೆಯ ವಸತಿ ಸಮಿತಿಯು ಏಪ್ರಿಲ್ 22ರೊಳಗೆ ದೆಹಲಿಯಲ್ಲಿರುವ (Delhi) ತುಘಲಕ್ ಲೇನ್ (Tughlaq Lane) ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿತ್ತು.

ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ (Sonia Gandhi) ಅವರ ಜನಪಥ್ ನಿವಾಸಕ್ಕೆ ತೆರಳುತ್ತಿದ್ದಾರೆ. ಆದರೂ ರಾಹುಲ್ ಗಾಂಧಿ ಅವರು ಕೆಲವು ನಿಯಮಗಳ ಪ್ರಕಾರ ಬಂಗಲೆಯಿಂದ ಹೊರಹೋಗಬೇಕಾಗಿದೆ.

ಕಳೆದ ವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಮನೆಯನ್ನು ಖಾಲಿಗೊಳಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ತುಘಲಕ್ ಲೇನ್‍ನ ಬಂಗಲೆ ಹೊರಗೆ 2 ಟ್ರಕ್‍ಗಳಲ್ಲಿ ಕಾರ್ಮಿಕರು ಮನೆಯಲ್ಲಿದ್ದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!