ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.27 ರಂದು ಸಂಜೆ 5 ಗಂಟೆಗೆ ಮಂಗಳೂರು ನಗರದ ಕಲೆಕ್ಟರ್ಸ್ ಗೇಟ್ ನಿಂದ ನೆಹರೂ ಮೈದಾನದವರೆಗೆ ಸುಮಾರು ಎರಡು ಕಿಮೀ ರೋಡ್ ಶೋ ನಡೆಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್ ಮಾಹಿತಿ ನೀಡಿದ್ದಾರೆ.
ಅಂದು ಅದ್ದೂರಿ ರೋಡ್ ಶೋ ನಡೆಯಲಿದ್ದು ದ.ಕ ಜಿಲ್ಲೆಯ ಎಲ್ಲ ಕ್ಷೇತ್ರಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಏ.25 ರಂದು ಖರ್ಗೆ ಕಾರ್ಯಕ್ರಮ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏ.24 ರಂದು ಮಂಗಳೂರಿಗೆ ಆಗಮಿಸಲಿದ್ದು, ಮರುದಿನ ಸುಳ್ಯ ಮತ್ತು ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.