ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme) ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಪ್ರಕಾರ, ಆಗಸ್ಟ್ 29 ಅಥವಾ 30 ರಂದು ಈ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ನೋಂದಣಿ ಆರಂಭಿಸಲಾಗಿದ್ದು, ಸುಮಾರು 1.2 ಕೋಟಿ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

ಮೈಸೂರಿನಲ್ಲಿ ಶೀಘ್ರದಲ್ಲೇ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳಾ ಕುಟುಂಬದ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ. ನಗದು ನೀಡಲಾಗುತ್ತದೆ. ಸುಮಾರು 1.5 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ಯೋಜನೆಯ ನೋಂದಣಿ ಜುಲೈ 19 ರಂದು ಪ್ರಾರಂಭವಾಯಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!