ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್ ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಭೇಟಿ ನೀಡಿದ್ದು, ಪ್ರಾರ್ಥನೆ ಸಲ್ಲಿಸಿದ್ದಾರೆ.
ಪ್ರಾರ್ಥನೆ ಸಲ್ಲಿಸಿದ ನಂತರ ಅವರು, ಸಿಖ್ಖರ ಅತ್ಯುನ್ನತ ತಾತ್ಕಾಲಿಕ ಸ್ಥಾನವಾದ ಅಕಲ್ ತಖ್ತ್ಗೆ ಭೇಟಿ ನೀಡಿದ್ದು, ಭಕ್ತರು ಬಳಸುವ ನೀರಿನ ಬಟ್ಟಲುಗಳನ್ನು ಸ್ವಚ್ಛಗೊಳಿಸುವ ಮೂಲಕ ‘ಸೇವಾ’ ಕಾರ್ಯ (ಸ್ವಯಂಪ್ರೇರಿತ ಸೇವೆ) ಮಾಡಿದರು.