ರಾಹುಲ್‌ ಗಾಂಧಿ ಸೇರಿದಂತೆ 18 ಮಂದಿ ಕೈ ನಾಯಕರು ದೆಹಲಿ ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಇಡಿ ಅಧಿಕಾರಿಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ರಾಹುಲ್ ಗಾಂಧಿ ಅವರನ್ನು ಹಲವು ಬಾರಿ ವಿಚಾರಣೆ ನಡೆಸಿರುವ ಇಡಿ ಎರಡು ದಿನಗಳಿಂದ ಸೋನಿಯಾ ಗಾಂಧಿ ಅವರನ್ನೂ ವಿಚಾರಣೆ ನಡೆಸುತ್ತಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಹಾಗೂ ಪ್ರಮುಖ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಡಿ ಪ್ರಕರಣದ ಜತೆಗೆ ಬೆಲೆ ಏರಿಕೆ ಹಾಗೂ ಜಿಎಸ್‌ಟಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಸಂಸತ್‌ ಆವರಣದಿಂದ ವಿಜಯ್‌ ಚೌಕ್‌ವರೆಗೆ ನಡೆಸುತ್ತಿದ್ದ ಪಾದಯಾತ್ರೆಯನ್ನು ಪೊಲೀಸರು ತಡೆದಿದ್ದಾರೆ.

ಹಾಗಾಗಿ ಪೊಲೀಸರು ಹಾಗೂ ಕಾಂಗ್ರೆಸ್‌ ನಾಯಕರ ನಡುವೆ ಮಾತಿನ ಚಕಮಕಿ ನಡೆದು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಬಂಧಿತರಲ್ಲಿ ದೀಪೇಂದರ್ ಹೂಡಾ ಮತ್ತು ಮಲ್ಲಿಕಾರ್ಜುನ ಖರ್ಗೆ ಕೂಡ ಇದ್ದಾರೆ. ಪೊಲೀಸರ ಸೂಚನೆ ಮೇರೆಗೆ ಪ್ರತಿಭಟನೆ ನಡೆಸುತ್ತಿದ್ದು, ಬಂಧಿಸಿರುವುದು ಕಾನೂನು ಬಾಹಿರ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!