ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ: ಹೈಕೋರ್ಟ್ ಗೆ ಕೇಂದ್ರ ಸರಕಾರ ಕೊಟ್ಟ ಮಾಹಿತಿ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ದ್ವಿಪೌರತ್ವ ವಿಚಾರವಾಗಿ ಕೇಂದ್ರ ಸರಕಾರ ಮಹತ್ವದ ಮಾಹಿತಿ ನೀಡಿದ್ದು, ದ್ವಿಪೌರತ್ವ ಕುರಿತು ಪರಿಶೀಲನೆ ಮಾಡುತ್ತಿರುವುದಾಗ ತಿಳಿಸಿದೆ.

ರಾಹುಲ್ ಬ್ರಿಟನ್ ಪ್ರಜೆಯಾಗಿರುವ ಕಾರಣ ಅವರ ಭಾರತದ ಪೌರತ್ವ ರದ್ದು ಮಾಡಬೇಕೆಂದು ಕೋರಿ ಕರ್ನಾಟಕದ ಶಿಶಿರ್ ವಿಘ್ನೇಷ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಬಗ್ಗೆ ಪ್ರತಿಕ್ರಿಸಲು ಕೇಂದ್ರ ಗೃಹ ಸಚಿವಾಲಯಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚಿಸಿತ್ತು.

ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರ, ದ್ವಿಪೌರತ್ವದ ವಿಷಯವನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರತಿಕ್ರಿಯೆಯಾಗಿ ತಿಳಿಸಿದೆ.

ಕೇಂದ್ರ ಗೃಹ ಸಚಿವಾಲಯವು, ಅರ್ಜಿದಾರರು ಮಾಡಿದ ಪ್ರಾತಿನಿಧ್ಯವನ್ನು ಸಚಿವಾಲಯದಲ್ಲಿ ಸ್ವೀಕರಿಸಲಾಗಿದೆ. ಡಿಸೆಂಬರ್ 19 ರಂದು ಈ ವಿಚಾರವನ್ನು ಪಟ್ಟಿ ಮಾಡಿ. ಪರಿಶೀಲನೆಯ ವಿವರಗಳನ್ನು ಅಂದು ತಿಳಿಸಲಾಗುವುದು ಎಂದು ಹೇಳಿದೆ.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿಘ್ನೇಶ್ ಅವರು, ಸರ್ಕಾರವು ತಕ್ಷಣವೇ ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ಹಿಂತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ರಾಹುಲ್‌ ಅವರ ಹೆಸರು ಪೌರತ್ವ ದಾಖಲೆಗಳಲ್ಲಿದೆ ಎನ್ನುವುದನ್ನು ನಾವು ಯುಕೆ ಸರ್ಕಾರದ ಜೊತೆ ಸಂವಹನ ಮಾಡಿ ದಾಖಲೆಗಳನ್ನು ಸ್ವೀಕರಿಸಿದ್ದೇವೆ ಎಂದು ಹೇಳಿದರು.

ನಾವು ಎಲ್ಲಾ ದಾಖಲೆಗಳನ್ನು ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿದ್ದೇವೆ. ಭಾರತೀಯ ಕಾನೂನುಗಳ ಅಡಿಯಲ್ಲಿ ದ್ವಿಪೌರತ್ವವನ್ನು ಅನುಮತಿಸಲಾಗುವುದಿಲ್ಲ. ಯಾರಾದರೂ ಮತ್ತೊಂದು ರಾಷ್ಟ್ರದ ಪೌರತ್ವವನ್ನು ತೆಗೆದುಕೊಂಡ ನಂತರ ಭಾರತೀಯ ಪೌರತ್ವವು ಸ್ವಯಂಚಾಲಿತವಾಗಿ ರದ್ದಾಗುತ್ತದೆ ಎಂದರು.

ರಾಹುಲ್‌ ಪೌರತ್ವಕ್ಕೆ ಸಂಬಂಧಿಸಿದಂತೆ ಇದೇ ರೀತಿಯ ಮನವಿಯನ್ನು ದೆಹಲಿ ಹೈಕೋರ್ಟ್‌ನಲ್ಲಿ ಮತ್ತು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿಯ ಸ್ಥಿತಿಯನ್ನು ಖಚಿತಪಡಿಸಿದ ನಂತರವೇ ಈ ವಿಷಯವನ್ನು ಆಲಿಸುವುದಾಗಿ ದೆಹಲಿ ಹೈಕೋರ್ಟ್ ಸೂಚಿಸಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!