June 24, 2026
Wednesday, June 24, 2026
spot_img

ಮೋದಿ, ಶಾ ಚುನಾವಣಾ ರಣತಂತ್ರಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೀದಿ ಭದ್ರಕೋಟೆ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿಗೆ ದೇಶವೇ ಸಂಭ್ರಮಿಸುತ್ತಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚುನಾವಣಾ ರಣತಂತ್ರಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಾವು ಮೋದಿ ಮತ್ತು ಅಮಿತ್ ಶಾ ಅವರ ಚುನಾವಣಾ ಕಾರ್ಯವೈಖರಿಯಿಂದ ಕಲಿಯಬೇಕಿದೆ. ವೃತ್ತಿಪರವಾಗಿ ಎಲ್ಲವನ್ನು ನಿರ್ವಹಿಸುತ್ತಾರೆ. ಇದೇ ರೀತಿ ಅವರ ರಾಜಕೀಯ ಸಂದೇಶಗಳು ಕೂಡ ಜನರನ್ನು ಒಂದುಗೂಡಿಸಬೇಕು. ಎಲ್ಲವೂ ಒಳ್ಳೆಯ ರೀತಿಯಲ್ಲಿ ಮುಂದುವರಿಯುವಂತೆ ಇರಲಿ ಎಂದು ಆಶಿಸುತ್ತೇನೆ ಎಂದರು.

ಇದೇ ವೇಳೆ ಕಾಂಗ್ರೆಸ್ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು. ತಪ್ಪನ್ನು ವಿಶ್ಲೇಷಿಸಬೇಕು ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !