ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟದ ಸೋಂಕಿನಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರನ್ನು ಪುತ್ರಿ ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ಕರೆತಂದಿದ್ದಾರೆ.
ಸೋನಿಯಾ ಗಾಂಧಿ ಮಂಗಳವಾರದಿಂದ ಅಸ್ವಸ್ಥರಾಗಿದ್ದಾರೆ. ಅದಕ್ಕಾಗಿಯೇ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಮಂಗಳವಾರ ಸಂಜೆ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯಲ್ಲಿ ಏಳು ಕಿ.ಮೀ ನಡೆದು ದೆಹಲಿಗೆ ಮರಳಿದ್ದಾರೆ.
ಬುಧವಾರ ಬೆಳಗ್ಗೆ ಆರು ಗಂಟೆಯಿಂದ ಭಾರತ್ ಜೋಡೋ ಯಾತ್ರೆ ಮುಂದುವರಿದಿದೆ. ಆದರೆ ಇಲ್ಲಿ ಪ್ರಿಯಾಂಕಾ ಹಾಗೂ ರಾಹುಲ್ ಜೊತೆಗೆ ಇರಲಿಲ್ಲ. ಮಧ್ಯಾಹ್ನದ ನಂತರ ಮತ್ತೆ ಯಾತ್ರೆಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.