ಕಾಂಗ್ರೆಸ್​ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಾಜಿ ಸ್ಪೀಕರ್ ಕೆಆರ್ ರಮೇಶ್ ಕುಮಾರ್ ಆಪ್ತ ಹಾಗೂ ಕೋಲಾರ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಕರ್ನಾಟಕ ಹೈಕೋರ್ಟ್​ ಸೋಮವಾರ ಸಿಬಿಐಗೆ ವಹಿಸಿದೆ.

ಸಿಬಿಐ ತನಿಖೆ ಕೋರಿ ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಕರಣವನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದ್ದಾರೆ.

ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್ ಅವರನ್ನು 2023 ಅಕ್ಟೋಬರ್ 23ರಂದು ಶ್ರೀನಿವಾಸಪುರ ಹೊರವಲಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!