ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಣ್ಣ ಸರ್ಕಾರಿ ಸ್ಥಾನಮಾನ ನೀಡಿದರೂ ನಿಭಾಯಿಸುತ್ತೇನೆ ಎಂದು ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅಧಿಕಾರದ ಆಸೆ ಬಿಚ್ಚಿಟ್ಟಿದ್ದಾರೆ.
ವರುಣಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚು ಸಮಯ ಕೊಡಲಾಗದ ಹಿನ್ನೆಲೆಯಲ್ಲಿ ಸರ್ಕಾರಿ ಸ್ಥಾನಮಾನದ ನಿರೀಕ್ಷೆಯಲ್ಲಿ ಮುಖ್ಯಮಂತ್ರಿಗಳ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಇದ್ದು, ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಒಲವು ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿಯಂತೆ ನನಗೆ ಯಾವುದಾದರೂ ಚಿಕ್ಕದಾದ ಸ್ಥಾನಮಾನ ನೀಡಿದರೂ ಸಹಕಾರಿ ಆಗುತ್ತದೆ. ಜನರ ಸೇವೆ ಮಾಡಲು ನಾನು ಸಿದ್ಧನಿದ್ದೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಲೋಕಸಭೆ ಚುನಾವಣೆಗೆ ಡಾ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕೆಂದು ಬೆಂಬಲಿಗರಿಂದ ಒತ್ತಾಯದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪಕ್ಷ ಸೂಚಿಸಿದರೆ ಆದೇಶ ಪಾಲಿಸಲು ಸಿದ್ಧ ಎಂದು ಹೇಳಿದ್ದಾರೆ.