ಹೊಸದಿಗಂತ ಡಿಜಿಟಲ್ ಡೆಸ್ಕ್ :
ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿರುವ ರಮೇಶ್ ಜಾರಕಿಹೊಳಿಯವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.
ಡಿಕೆ ಶಿವಕುಮಾರ್ ಆಪ್ತರಿಂದ ಜಾರಕಿಹೊಳಿ ವಿರುದ್ದ ಕ್ರಮ ಜರುಗಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮೂಲಕ ಹಿರಿಯ ವಕೀಲ ಸಂಕೇತ್ ಏಣಗಿ ಸ್ಪಷ್ಟಪಡಿಸಿದ್ದಾರೆ.
ಟ್ವಿಟ್ಟರ್ ನಲ್ಲಿ, “KPCC ಅಧ್ಯಕ್ಷರಾದ ಶ್ರೀ ಡಿ. ಕೆ. ಶಿವಕುಮಾರ್ ವಿರುದ್ಧ ನಿರಂತರ ಮಿಥ್ಯಾಪವಾದ, ನಿಂದನೆ, ದೋಷಾರೋಪಣೆ ಹಾಗೂ ಅವರ ಪ್ರಸಿದ್ಧಿ ಘಾಸಿಗೊಳಿಸಲು ಸುಳ್ಳು ಹಾಗೂ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶೀಘ್ರವೇ ಮಾನನಷ್ಟ ಮೊಕದ್ದಮೆ ಸಹಿತ ಇನ್ನಿತರ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಟ್ವೀಟ್ ಮಾಡಿದ್ದಾರೆ.
KPCC ಅಧ್ಯಕ್ಷರಾದ ಶ್ರೀ ಡಿ. ಕೆ. ಶಿವಕುಮಾರ್ ವಿರುದ್ಧ ನಿರಂತರ ಮಿಥ್ಯಾಪವಾದ, ನಿಂದನೆ, ದೋಷಾರೋಪಣೆ ಹಾಗೂ ಅವರ ಪ್ರಸಿದ್ಧಿ ಘಾಸಿಗೊಳಿಸಲು ಸುಳ್ಳು ಹಾಗೂ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶೀಘ್ರವೇ ಮಾನನಷ್ಟ ಮೊಕದ್ದಮೆ ಸಹಿತ ಇನ್ನಿತರ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.
– ಸಂಕೇತ ಏಣಗಿ
— Sanket Yenagi (@Sanket_Yenagi) February 2, 2023