Wednesday, August 10, 2022

Latest Posts

ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರ ಸಮಾವೇಶ: ಸಂಸದ ಬಿ.ವೈ.ರಾಘವೇಂದ್ರ

ಹೊಸದಿಗಂತ ವರದಿ, ಶಿವಮೊಗ್ಗ:

ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರು ನಗರದಲ್ಲಿ ಸಮಾವೇಶ ನಡೆಸಿದ್ದು, ಜಿಲ್ಲೆಯ ಜನತೆ ಇದಕ್ಕೆ ಬೆಂಬಲಿಸುವುದಿಲ್ಲವೆಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ವಿರೋಧ ಪಕ್ಷದಲ್ಲಿ ಕೂರಲು ಆಗುತ್ತಿಲ್ಲ. ಅಧಿಕಾರವಿಲ್ಲದೆ ಹಪಾಹಪಿಸುತ್ತಿರುವ ಕಾಂಗ್ರೆಸ್ ನಾಯಕರು ಸಣ್ಣ ವಿಷಯ ದೊಡ್ಡದು ಮಾಡಲು ಹೊರಟಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರು ಗೂಂಡಾಗಿರಿ ಬಿಟ್ಟು ಅಭಿವೃದ್ಧಿ ವಿಷಯದಲ್ಲಿ ಜನರ ಮುಂದೆ ಬರಲಿ. ಅದನ್ನು ಬಿಟ್ಟು ಕ್ಷುಲ್ಲಕ ವಿಷಯವನ್ನು ಹಿಡಿದು ಜನರ ಮುಂದೆ ಹೋಗುತ್ತಿದ್ದಾರೆ. ಜಿಲ್ಲೆ ಜನತೆ ಅವರ ವರ್ತನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು. ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಜಿಲ್ಲೆಗೆ 1192 ಕೋಟಿ ರೂ. ವೆಚ್ಚದ 10 ಕಾಮಗಾರಿಗಳಿಗೆ ಮಂಜೂರಾತಿ ಸಿಕ್ಕಿದೆ. ತುಂಗಾನದಿಗೆ ಇನ್ನೊಂದು ಸೇತುವೆ ನಿರ್ಮಾಣ ಕ್ಕೂ ಮಂಜೂರಾತಿ ಸಿಕ್ಕಿದೆ ಎಂದು ಹೇಳಿದರು.

ಭದ್ರಾವತಿಗೆ ಸಂಬಂಧಪಟ್ಟಂತೆ ವಿಐಎಸ್ ಎಲ್ ಹಾಗೂ ಎಂಪಿಎಂ ಪುನಶ್ಚೇತನಕ್ಕೆ ಖಾಸಗಿ ಸಹಭಾಗಿತ್ವದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದ ಅವರು, ಈ ತಿಂಗಳ ಅಂತ್ಯಕ್ಕೆ ಒಂದು ಲಕ್ಷ ಕೊವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss