ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ನಾಲ್ಕನೇ ಯೋಜನೆ ಗೃಹಲಕ್ಷ್ಮಿ ಚಾಲನೆ ಹಿನ್ನೆಲೆ ರಾಷ್ಟ್ರ ಕಾಂಗ್ರೆಸ್ ನಾಯಕರು ಮೈಸೂರು ತಲುಪಿದ್ದಾರೆ. ಕೈ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಜೊತೆ ಡಿಕೆಶಿ ಕೂಡ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.
ಕಾಂಗ್ರೆಸ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಕಾರ್ಯಕ್ರಮದ ಆಯೋಜಿಸಿರುವ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಜನಸಾಗರವೇ ನೆರೆದಿದೆ. ಎತ್ತ ನೋಡಿದರೂ ಜನವೋ ಜನ. ಕಣ್ಣಾಡಿಸಿದಲ್ಲೆಲ್ಲಾ ಜನಸ್ತೋಮವೇ ಕಂಡುಬರುತ್ತಿದೆ. ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನ ಬರುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಹೇಳಿತ್ತು.