ಹೊಸದಿಗಂತ ವರದಿ,ಶಿವಮೊಗ್ಗ:
ದೇಶದ್ರೋಹಿಗಳನ್ನು ಕಾಪಾಡುತ್ತಿರುವ ಕಾಂಗ್ರೆಸ್ ಮುಖಂಡರನ್ನೂ ಗಡೀಪಾರು ಮಾಡಬೇಕು ಎಂದು ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.
ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಘಟನೆ ಖಂಡಿಸಿ ಹಾಗೂ ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿ ವಿರೋಸಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ರಾಗಿಗುಡ್ಡದ ಘಟನೆ ಇಡೀ ರಾಜ್ಯದ ಗಮನ ಸೆಳೆದಿದೆ. ಈ ಸಂದಭರ್ದಲ್ಲಿ ರಾಜ್ಯ ಸರ್ಕಾರದ ವರ್ತನೆ ಸರಿ ಇಲ್ಲ. ಹಿಂದೂ ಸಮಾಜ ಶಾಂತಿಯಿಂದ ಇದೆ ಎಂದರೆ ಅದು ದೌರ್ಬಲ್ಯವಲ್ಲ. ಗೃಹ ಸಚಿವರು ಇದು ಸಣ್ಣ ಘಟನೆ ಎನ್ನುತ್ತಾರೆ. ಉಸ್ತುವಾರಿ ಸಚಿವರು ಖಡ್ಗವನ್ನೇ ಅಸಲಿಯಲ್ಲ ಎನ್ನುತ್ತಾರೆ. ಈದ್ ಮಿಲಾದ್ ಮೆರವಣಿಗೆ ಸಂದರ್ಭ ಹಿಂದೂ ಅಮಾಯಕರ ಮೇಲೆ ದೌರ್ಜನ್ಯ ನಡೆದಿದೆ. ತಪ್ಪಿತಸ್ಥರನ್ನು ಗಡಿಪಾರು ಮಾಡಿದರೆ ಸಾಲದು. ಕಾಂಗ್ರೆಸ್ ಮುಖಂಡರನ್ನೂ ಗಡಿಪಾರು ಮಾಡಬೇಕು ಎಂದರು.