ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕಳೆದ 11 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಮೂಲಕ ದಿನದಿಂದ ದಿನಕ್ಕೆ ತನ್ನ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೈಸೂರಿನಲ್ಲಿಂದು ಹೇಳಿದ್ದಾರೆ.
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹಲವು ನಾಯಕರು ಕನಸು ಕಾಣುತ್ತಿದ್ದಾರೆ. ಅದು ಸಾಧ್ಯವಾಗದ ಮಾತು. RSS ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆ ಬಾಲಿಶ ಮತ್ತು ಹಾಸ್ಯಾಸ್ಪದದಿಂದ ಕೂಡಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿವಿಧ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ. ಅಭಿವೃದ್ಧಿಗೂ ಅನುದಾನ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಗೆ ಭೂಮಿಕೆ ಸಿದ್ಧವಾಗಿದೆ. ಇದಕ್ಕಾಗಿಯೇ ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರನ್ನಾಗಿ ಮಾಡುವ ಪ್ರಯತ್ನ ನಡೆದಿದೆ ಎಂದು ಹೇಳಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿ, ಬಿಜೆಪಿ ರಾಷ್ಟ್ರೀಯ ಪಕ್ಷ. ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ತಿಳಿಸಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ