ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ತೈಲ ಬೆಲೆ ಏರಿಕೆ ಖಂಡಿಸಿ ವಿನೂತನವಾಗಿ ಪ್ರತಿಭಟಿಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸಲು ಎತ್ತಿನಗಾಡಿಯಲ್ಲಿ ತೆರಳಲಿದ್ದಾರೆ.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮನೆ ಮುಂದೆ ಅಲಂಕೃತಗೊಂಡಿರುವ ಎತ್ತಿನಗಾಡಿಗಳು ನಿಂತಿದ್ದು, ಇನ್ನೇನು ಕೆಲವೇ ಸಮಯದಲ್ಲಿ ನಾಯಕರು ಎತ್ತಿನಗಾಡಿ ಏರಲಿದ್ದಾರೆ.
ಈ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಟಾಂಗ್ ನೀಡಲು ಸಿದ್ಧವಾಗಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೊರೋನಾ ನಿರ್ವಹಣೆ, ಲಸಿಕೆ ಪೂರೈಕೆ ವ್ಯತ್ಯಯದ ಬಗ್ಗೆ ಕಾಂಗ್ರೆಸಿಗರು ಧ್ವನಿ ಎತ್ತಲಿದ್ದಾರೆ. 11 ಗಂಟೆಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪ ಆರಂಭವಾಗಲಿದ್ದು, ಕಾಂಗ್ರೆಸ್ ನಾಯಕರು ಎತ್ತಿನ ಗಾಡಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.