ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಸರ್ಕಾರದಿಂದ ಈ ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಕಾಂಗ್ರೆಸ್ ಏಜೆಂಟರು ಕೆಲಸ ಮಾಡುವುದಿಲ್ಲ. ಜೆಡಿಎಸ್ ನಂತರ 12 ಜನ ಕರೆದುಕೊಂಡು ಬನ್ನಿ ನಂತರ 13 ಜನ ಕರೆದುಕೊಂಡು ಬನ್ನಿ ಎಂಬ ಮಾತು ಕೇಳಿ ಬರುತ್ತಿದೆ. ಇದೆಲ್ಲ ನನಗೆ ಗೊತ್ತು. ನಮ್ಮ ಯಾವೊಬ್ಬ ಶಾಸಕರು ಪಕ್ಷ ಬಿಡುವ ಸ್ಥಿತಿಯಲ್ಲಿಲ್ಲ ಎಂದರು.
ಕಾಂಗ್ರೆಸ್‌ನವರು ಏನೇನು ಮಾಡುತ್ತಿದ್ದಾರೆ ಗೊತ್ತಿದೆ. ನಮ್ಮ ಎಲ್ಲಾ ಶಾಸಕರು ಏನೇನು ನಡೆಯುತ್ತಿದೆ ಎಂದು ನನ್ನ ಬಳಿ ಹೇಳಿದ್ದಾರೆ. ಕಾಂಗ್ರೆಸ್‌ನವರ ಪಾಪದ ಕೊಡ ತುಂಬಿದೆ. ದೇವರೇ ಕಾಂಗ್ರೆಸ್‌ನವರಿಗೆ ಶಿಕ್ಷೆ ಕೊಡುತ್ತಾನೆ ಅನ್ನೋದು ನನ್ನ ಅಭಿಪ್ರಾಯ ಎಂದು ವಾಗ್ದಾಳಿ ನಡೆಸಿದರು.