ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್​ ನಾಯಕನ ಭೇಟಿ: ತೆಲಂಗಾಣ ಡಿಜಿಪಿ,ಐಜಿಪಿ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲೇ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ತೆಲಂಗಾಣ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರನ್ನು ಚುನಾವಣಾ ಆಯೋಗವು ಅಮಾನತು ಮಾಡಿ ಆದೇಶಿಸಿದೆ.

ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲೇ ಕಾಂಗ್ರೆಸ್​ ರಾಜ್ಯ ಘಟಕದ ಅಧ್ಯಕ್ಷ ರೇವಂತ್​ ರೆಡ್ಡಿ ಅವರನ್ನು ಡಿಜಿಪಿ ಸೇರಿದಂತೆ ಇತರ ಪೊಲೀಸ್​ ಅಧಿಕಾರಿಗಳು ಭೇಟಿ ಮಾಡಿದ್ದರು.

ತೆಲಂಗಾಣದ 119 ಸದಸ್ಯ ಬಲದ ವಿಧಾನಸಭೆಯ ಚುನಾವಣಾ ಫಲಿತಾಂಶ ಬಹುತೇಕ ಹೊರಬಂದಿದೆ. ಆಡಳಿತಾರೂಢ ಬಿಆರ್​ಎಸ್​ ವಿರುದ್ಧ ಕಾಂಗ್ರೆಸ್​ ಗೆಲುವು ಸಾಧಿಸಿದೆ. ಕೈ ಪಡೆ 63 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಆರ್​ಎಸ್​ 40 ಸ್ಥಾನಗಳಿಗೆ ಕುಸಿದಿದೆ. ಬಿಜೆಪಿ 9 ಕ್ಷೇತ್ರ ಮತ್ತು ಎಐಎಂಐಎಂ 6 ಕ್ಷೇತ್ರ ಹಾಗೂ ಒಂದು ಕಡೆ ಸಿಪಿಐ ಮುನ್ನಡೆಯಲ್ಲಿದೆ.

ಚುನಾವಣೆಯ ಫಲಿತಾಂಶ ಪೂರ್ಣವಾಗಿ ಪ್ರಕಟವಾಗುವ ಮೊದಲೇ ಕಾಂಗ್ರೆಸ್​ ಸಿಎಂ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿರುವ ರೇವಂತ್​ ರೆಡ್ಡಿ ಅವರನ್ನು ಪೊಲೀಸ್​ ಅಧಿಕಾರಿಗಳು ಭೇಟಿಯಾಗಿ ಶುಭಾಶಯ ಕೋರಿದ್ದರು. ಹೈದರಾಬಾದ್​ನಲ್ಲಿ ರೇವಂತ್ ರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿರುವ ಡಿಜಿಪಿ ಅಂಜನಿ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಹೂಗುಚ್ಛ ನೀಡಿ ಅಭಿನಂದಿಸಿದ್ದರು. ತೆಲಂಗಾಣದ ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮತ್ತು ನೋಡಲ್ (ವೆಚ್ಚ) ಅಧಿಕಾರಿ ಮಹೇಶ್ ಭಾಗವತ್ ಸಹ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!