ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರ ವೇ ಬಿಡುಗಡೆಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾಳೆ (ಮಾ.7) ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಬಳಿಕ ಪಟ್ಟಿ ಬಿಡುಗಡೆಗೊಳಿಸಲಾಗುವುದು ಎಂದರು.
ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಪಶ್ಚಾತಾಪ ಪಡಲಿದ್ದಾರೆ. ಜೊತೆಗೆ ಇನ್ನೊಂದು ತಿಂಗಳಲ್ಲಿ ಪಶ್ಚಾತ್ತಾಪದ ಹೇಳಿಕೆ ಕೂಡಾ ನೀಡಲಿದ್ದಾರೆ ಎಂದು ಅವರು ಲೇವಡಿ ಮಾಡಿದರು.
ಮಹದಾಯಿ ಕಾಮಗಾರಿ ಅನುಷ್ಠಾನಗೊಳಿಸಲು ನಾವು ಈಗಾಗಲೇ ಟೆಂಡರ್ ಕರೆದಿದ್ದೇವೆ. ಸಚಿವ ಪ್ರಲ್ಹಾದ ಜೋಶಿ ಕೇಂದ್ರದಿಂದ ನಿರಾಕ್ಷೇ ಪಣಾ ಪತ್ರ ಕೊಡಿಸಲಿ ಎಂದೂ ಅವರು ಇದೇ ಸಂದರ್ಭ ಹೇಳಿದರು.