ಬಿಹಾರದಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್‌ ಪಾದಯಾತ್ರೆ; ರಾಹುಲ್‌ ಗಾಂಧಿ ಸಾಥ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಬಿಹಾರಕ್ಕೆ ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಭೇಟಿ ನೀಡಲಿದ್ದು, ಬೇಗುಸರಾಯ್ ಜಿಲ್ಲೆಯಲ್ಲಿ ನಡೆಯುತ್ತಿರುವ ಪಕ್ಷದ ‘ಪಲಯನ್ ರೋಕೋ, ನೌಕ್ರಿ ದೋ’ ಪಾದಯಾತ್ರೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರ ಜೊತೆಯಾಗಲಿದ್ದಾರೆ.

ಇದಾದ ಬಳಿಕ ಅವರು ಬೇಗುಸರಾಯ್‌ನಿಂದ ಪಾಟ್ನಾಗೆ ಮರಳಲಿದ್ದು, ಅಲ್ಲಿ ಸಂವಿಧಾನ ಉಳಿಸಿ ವಿಚಾರ ಸಂಕಿರಣದ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಬಳಿಕ ಸಂಜೆ ಕಾಂಗ್ರೆಸ್​ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ.

ಈ ವರ್ಷದ ಆರಂಭದಿಂದ ಅಂದರೆ, ಜನವರಿಯಿಂದ ಬಿಹಾರಕ್ಕೆ ರಾಹುಲ್​ ಗಾಂಧಿ ನಡೆಸುತ್ತಿರುವ ಮೂರನೇ ಭೇಟಿ ಇದಾಗಿದೆ. ರಾಜ್ಯ ಈ ವರ್ಷಾಂತ್ಯಕ್ಕೆ ಚುನಾವಣೆ ಎದುರಿಸಲು ಸಜ್ಜಾಗಿದ್ದು, ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೈಂದ್ದಾಂತಿಕವಾಗಿ ಸೋಲಿಸುವಂತೆ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ತಮ್ಮ ಭೇಟಿ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಒಂದು ನಿಮಿಷದ ವಿಡಿಯೋ ಹಂಚಿಕೊಂಡಿರುವ ರಾಹುಲ್​ ಗಾಂಧಿ, ಬೇಗುಸರಾಯ್‌ನಲ್ಲಿ ನಡೆಯುವ ಪಾದಯಾತ್ರೆಗೆ ಬಿಳಿ ಟಿ ಶರ್ಟ್​ ತೊಟ್ಟು ಜೊತೆಯಾಗುವಂತೆ ಯುವಕರಿಗೆ ಕರೆ ನೀಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!