ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸುತ್ತಿದೆ.
ಕಾಂಗ್ರೆಸ್ ಕಾರ್ಯಕರ್ತರು ಎಲ್ಲೆಡೆ ಜಮಾಯಿಸಿ ರಾಜ್ಯಪಾಲರಿಗೆ ಧಿಕ್ಕಾರ ಕೂಗಿದರು. ರಾಜಧಾನಿಯಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಿ ಧರಣಿ ಪ್ರತಿಭಟನೆ ನಡೆಸಿದರು.
ರಾಜ್ಯಪಾಲರ ವಿರುದ್ಧ ಬೀದಿಗಿಳಿದಿದ್ದು, ರಾಜಧಾನಿಯಲ್ಲಿ ರಾಜಭವನ ಮುತ್ತಿಗೆಗೆ ಕೈ ಕಾರ್ಯಕರ್ತರು ಯತ್ನಿಸಿದರು. ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನಕ್ಕೆ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ʼಗವರ್ನರ್ ಗೋ ಬ್ಯಾಕ್ʼ ಎಂದು ಕೈ ಕಾರ್ಯಕರ್ತರು ಘೋಷಣೆ ಕೂಗಿದರು.