ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಕೆಂಪು ಕೋಟೆ ಸುತ್ತ 144 ಸೆಕ್ಷನ್ ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದೆ.

ಜೈರಾಂ ರಮೇಶ್, ಪಿ ಚಿದಂಬರಂ ಸೇರಿದಂತೆ ಹಲವು ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ ದೆಹಲಿಯ ಕಾಂಗ್ರೆಸ್ ಪ್ರತಿಭಟನಾ ನಿರತ ಸ್ಥಳ ರೆಡ್ ಪೋರ್ಟ್ ಬಳಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದ ದೆಹಲಿ ಪೊಲೀಸರು 50ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಮಾತ್ರವಲ್ಲ, ಕಾಂಗ್ರೆಸ್ ಮೈತ್ರಿ ಪಕ್ಷ ಸೇರಿದಂತೆ ವಿಪಕ್ಷಗಳ ಹಲವು ನಾಯಕರು ಪಾಲ್ಗೊಂಡಿದ್ದಾರೆ.

ಇಂದು ರಾತ್ರಿ ಕಾಂಗ್ರೆಸ್‌ ಮೆರವಣಿಗೆ ಮಾಡಿ ಪ್ರತಿಭಟನೆ ನಡೆಸಿದೆ. ಹಳೆ ದೆಹಲಿಯ ಚಾಂದನಿ ಚೌಕ್‌ನಲ್ಲಿರುವ ಕೆಂಪುಕೋಟೆಯಿಂದ ಟೌನ್‌ ಹಾಲ್‌ವರೆಗೆ ಕಾಂಗ್ರೆಸ್‌ ಸಂಸದರು ಮೆರವಣಿಗೆ ಮಾಡಿ ತಮ್ಮ ವಿರೋಧ ವ್ಯಕ್ತಪಡಿಸಿದರು. ಈ ಜಾಥಾಗೆ ‘ಲೋಕ ತಂತ್ರ ಬಚಾವ್‌ ಮಶಾಲ್‌ ಶಾಂತಿ ಯಾತ್ರೆ’ ಎಂದು ಹೆಸರಿಡಲಾಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!