September 30, 2026
Wednesday, September 30, 2026
spot_img

ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್: 42 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ.ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 42 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದೆ.

ಈಗಾಗಲೇ ರಾಜಕೀಯ ಪಕ್ಷಗಳು ಪ್ರಚಾರ ಆರಂಭಿಸಿದ್ದು, ಇದರ ನಡುವೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೋಗೋಯ್ ಜೋಹ್ರತ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಎಲ್ಲರಗಿಂತ ಮೊದಲು ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿತ್ತು. ಬಳಿಕ ಟಿಕೆಟ್ ಸಿಕ್ಕ ಅಭ್ಯರ್ಥಿಗಳು ಆಯಾ ಕ್ಷೇತ್ರದಲ್ಲಿ ಕೆಲಸ ಮಾಡುಲು ಅನುಕೂಲ ಮಾಡಿಕೊಡಲಾಗಿತ್ತು. ಹೀಗಾಗಿ ಇದೇ ರಣತಂತ್ರವನ್ನು ಅಸ್ಸಾಂ ಕಾಂಗ್ರೆಸ್ ಕೂಡ ಅನುಸರಿಸಿದೆ.

ಅಸ್ಸಾಂ ವಿಧಾನಸಭೆ ಚುನಾವಣೆ ಮಾರ್ಚ್ ಅಂತ್ಯ ಅಥವಾ ಎಪ್ರಿಲ್ ತಿಂಗಳಲ್ಲಿ ನಡೆಯಲಿದೆ. ಶೀಘ್ರದಲ್ಲೇ ಕೇಂದ್ರ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ.

Must Read