ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಆರೋಪದ ಕಿಡಿ ಹೆಚ್ಚುತ್ತಿದ್ದು, ಸದನದ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ಅನಿರ್ದಿಷ್ಟಾವಧಿ ವರೆಗೆ ಮುಂದೂಡಿದರು.
ಸಭಾಪತಿ ಬಸವರಾಜ್ ಹೊರಟ್ಟಿ ತೆರಳಿದ ಬಳಿಕವು ಕಲಾಪದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಪರಸ್ಪರ ವಾಗ್ವಾದ ನಡೆಯಿತು.
ಪರಿಷತ್ ನಲ್ಲಿ ಬಸವರಾಜ ಹೊರಟ್ಟಿ ಪ್ರಸ್ತಾಪಿಸಿದ್ದು, ಸಿಟಿ ರವಿಗೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಆಡಿಯೋ ಮತ್ತು ವಿಡಿಯೋ ಕುರಿತು ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.