ಕಾಂಗ್ರೆಸ್ ದುರಾಡಳಿತವೇ ಅದಕ್ಕೆ ಮುಳುವಾಗಿದೆ: ಪ್ರಹ್ಲಾದ್ ಜೋಷಿ ಚಾಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ಮತದಾರ ತಿರಸ್ಕರಿಸಿರುವುದು ಚುನಾವಣಾ ಫಲಿತಾಂಶದಲ್ಲಿ ಸ್ಪಷ್ಟವಾಗಿದೆ ಎಂದು ಕೇಂದ್ರ ಸಚಿವ, ಬಿಜೆಪಿಯ ರಾಜಸ್ಥಾನ ಚುನಾವಣಾ ಉಸ್ತುವಾರಿ ಪ್ರಹ್ಲಾದ್‌ ಜೋಷಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿಯ ಹಿರಿಯ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದೇವೆ. ರಾಜಸ್ಥಾನದಲ್ಲಿ 124ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದರು.

ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಮತದಾರರು ಕಾಂಗ್ರೆಸ್‌ನ ಸುಳ್ಳು ಭರವಸೆಗಳನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ ಎಂದು ಜೋಷಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!