ಕೈಗೆ ‘ಬೈ ಬೈ’: ಬಿಎಸ್‌ಪಿ ಅಂಗಳಕ್ಕೆ ಕಾಂಗ್ರೆಸ್‌ನ ಅಖಂಡ ಶ್ರೀನಿವಾಸಮೂರ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ನಾಮಪತ್ರ ಸಲ್ಲಿಸಿದ ಬಳಿಕ ಪ್ರಚಾರದ ಅಬ್ಬರ ಶುರುವಾಗಿದೆ. ಈ ನಡುವೆ ಕೆಲವು ಅಭ್ಯರ್ಥಿಗಳು ಆ ಪಕ್ಷದಿಂದ ಈ ಪಕ್ಷಕ್ಕೆ, ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುತ್ತಿದ್ದಾರೆ.

ಈ ವೇಳೆ 2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಪುಲಿಕೇಶಿ ನಗರ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ತೊರೆದು ಬಿಎಸ್‌ಪಿ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷವು ಟಿಕೆಟ್ ನಿರಾಕರಿಸಿದ ಹಿನ್ನೆಲೆ ಅಖಂಡ ಶ್ರೀನಿವಾಸಮೂರ್ತಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಇದೀಗ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದರೂ ದಲಿತ ಶಾಸಕನಾಗಿದ್ದ ಅಖಂಡ ಶ್ರೀನಿವಾಸಮೂರ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಬದಲಾಗಿ ಎ.ಸಿ. ಶ್ರೀನಿವಾಸ್ ಎಂಬುವವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!