ಕಾಂಗ್ರೆಸ್​ ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರು ಅಪಘಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೊಳ್ಳೆಗಾಲ ಕಾಂಗ್ರೆಸ್ ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರು ಅಪಘಾತಕ್ಕೆ ಒಳಗಾಗಿದೆ.

ತಡರಾತ್ರಿ ಮೈಸೂರು ಹೊರವಲಯದಲ್ಲಿ ಅಪಘಾತ ಸಂಭವಿಸಿದೆ. ಶಾಸಕರು ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ. ಮೈಸೂರಿನ ಹೊರವಲಯದ ನಾಡನಹಳ್ಳಿ ಬಳಿ ಟೈರ್ ಬ್ಲಾಸ್ಟ್ ಆಗಿದೆ. ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದಿದೆ. ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಶಾಸಕರೂ ಸೇರಿ ಕಾರಿನಲ್ಲಿದ್ದವರು ಸುರಕ್ಷಿತರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!