ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ವಿಧಿವಶರಾಗಿದ್ದಾರೆ. ರಾಜಾ ವೆಂಕಟಪ್ಪ ನಾಯಕ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೆಲ ದಿನದ ಹಿಂದೆಯಷ್ಟೇ ಉಗ್ರಾಣ ಕಂಪನಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಕಾಂಗ್ರೆಸ್‌ನಿಂದ ರಾಜಕೀಯ ಜೀವನ ಆರಂಭಿಸಿದ ರಾಜಾ ವೆಂಕಟಪ್ಪ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!