March 15, 2026
Sunday, March 15, 2026
spot_img

ಮಾಲೂರು ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಶಾಸಕ ನಂಜೇಗೌಡ ಗೆಲುವು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮರು ಮತ ಎಣಿಕೆಯಲ್ಲಿ ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಲ್ಕ ಬಾಗ್ನಿ ಅವರಿದ್ದ ಪೀಠವು, ) ನಂಜೇಗೌಡ ಅವರು ಪ್ರತಿಸ್ಪರ್ಧಿ ಬಿಜೆಪಿಯ ಕೆ.ಎಸ್. ಮಂಜುನಾಥ ಗೌಡ ಅವರಿಗಿಂತ 250 ಹೆಚ್ಚು ಮತಗಳನ್ನು ಪಡೆದಿದ್ದಾರೆ ಎಂದು ತಿಳಿಸಿದ್ದು, ಇದೇ ವೇಳೆ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ರದ್ದುಗೊಳಿಸಿದೆ.

ಮರು ಮತ ಎಣಿಕೆಯಲ್ಲಿ ನಂಜೇಗೌಡ 50,957 ಮತಗಳನ್ನು ಮತ್ತು ಮಂಜುನಾಥ ಗೌಡ 50,707 ಮತಗಳನ್ನು ಪಡೆದಿದ್ದಾರೆ. ಎಣಿಕೆ ಪ್ರಕ್ರಿಯೆಯ ವಿಡಿಯೋ ರೆಕಾರ್ಡಿಂಗ್ ಕಡ್ಡಾಯವೇ ಅಥವಾ ಇಲ್ಲವೇ ಎಂಬುದರ ಕುರಿತು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುತ್ತಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕಾನೂನುಬದ್ದವಾಗಿ ನಡೆದಿಲ್ಲ, ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠವು ನಂಜೇಗೌಡ ಆಯ್ಕೆಯನ್ನು ಅಸಿಂಧುಗೊಳಿಸಿತ್ತು. ಇದನ್ನು ಪ್ರಶ್ನೆ ಮಾಡಿ ಶಾಸಕರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಪುನಃ ಎಣಿಕೆ ಮಾಡಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಸದ್ಯ ಸುಪ್ರೀಂ ಕೋರ್ಟ್‌ ಫಲಿತಾಂಶ ಬಹಿರಂಗ ಪಡಿಸಿದೆ. ಒಟ್ಟು 250 ಮತಗಳ ಅಂತರದಲ್ಲಿ ಕೆ ವೈ ನಂಜೇಗೌಡ ಗೆಲುವು ಸಾಧಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !