ಹೊಸದಿಗಂತ ಆನ್ ಲೈನ್ ಡೆಸ್ಕ್:
ಬಿಹಾರದ ಕರ್ಗಹಾರ್ ಕಾಂಗ್ರೆಸ್ ಶಾಸಕ ಸಂತೋಷ್ ಮಿಶ್ರಾ ಅವರ ಸೋದರಳಿಯನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಸಸಾರಾಮ್ ನಗರದಲ್ಲಿ ಶನಿವಾರ ನಡೆದಿದೆ.
ಶಾಸಕ ಸಂತೋಷ್ ಮಿಶ್ರಾ ಅವರ ಸೋದರಳಿಯ ಸಂಜೀವ್ ಮಿಶ್ರಾ ಕೊಲೆಯಾದ ದುರ್ದೈವಿ.
ಮನೆಯಿಂದ ಹೊರಬಂದ ಸಂಜೀವ್ ಮಿಶ್ರಾ ಅವರ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲು ಯತ್ನಿಸಿದರೂ ಮಾರ್ಗ ಮಧ್ಯೆ ಸಂಜೀವ್ ಮೃತಪಟ್ಟಿದ್ದಾರೆ.
ಸಂಜೀವ್ ಮಿಶ್ರಾ ಅವರು ಈ ಬಾರಿಯ ಪಂಚಾಯತಿ ಚುನಾವಣೆಗೆ ಸ್ಪರ್ಧಿಸುವ ನಿರೀಕ್ಷೆ ಹೊಂದಿದ್ದರು.
ಘಟನೆ ಬಗ್ಗೆ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಹಳೆಯ ವೈಮಸ್ಸಿನಿಂದ ಕೃತ್ಯ ನಡೆಸಲಾಗಿದೆ ಎಂದು ಶಂಕಿಸಲಾಗಿದೆ. ಸಂಜೀವ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.