ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು: ಆದೇಶ ಕೇಳಿ ನನಗೆ ಶಾಕ್ ಆಗಿದೆ ಎಂದ ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಎಲ್ಲಾ ಪ್ರಕರಣಗಳಲ್ಲಿ ತಲಾ 7 ವರ್ಷ ಜೈಲು ಶಿಕ್ಷೆ ಎಂದು ಕೋರ್ಟ್ ತೀರ್ಪು ನೀಡಿದ್ದು, ಕೋರ್ಟ್ ಆದೇಶ ಕೇಳಿ ನನಗೆ ಶಾಕ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇಲೆಕೇರಿ ಅದಿರು ನಾಪತ್ತೆ ಕೇಸ್‌ನ 6 ಪ್ರಕರಣಗಳಲ್ಲೂ ಕಾಂಗ್ರೆಸ್ ಶಾಸಕ ಸತೀಶ್ ರೈಗೆ 7 ವರ್ಷ ಜೈಲು ಎಂದು ಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್ ಆದೇಶ ಕೇಳಿ ನನಗೆ ಶಾಕ್ ಆಗಿದೆ. ಅಫೀಲು ಮಾಡಲು ಶಾಸಕರಿಗೆ ಅವಕಾಶವಿದೆ. ಅವರು ಲೀಗಲ್ ಟೀಂ ಜೊತೆ ಮಾತನಾಡುತ್ತಾರೆ. ಶಾಸಕ ಸ್ಥಾನದಿಂದ ಅನರ್ಹ ಆಗುವ ಕುರಿತು ನನಗೆ ತಿಳಿದಿಲ್ಲ. ಮುಂದೆ ಏನು ಆಗುತ್ತದೆ ನೋಡೋಣ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!