ದೆಹಲಿ ಇಡಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗುರುವಾರ ದೆಹಲಿಯ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಆಗಮಿಸಿದ್ದಾರೆ.

ಕಳೆದ ವರ್ಷ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಾಂಗ್ರೆಸ್ ಶಾಸಕರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಇಡಿ ವರದಿಯ ಆಧಾರದ ಮೇಲೆ ಜಮೀರ್‌ಗೆ ಸೇರಿದ ಐದು ಸ್ಥಳಗಳಲ್ಲಿ ಶೋಧ ನಡೆಸಿತ್ತು.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಮತ್ತು ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಮೀರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು.‌

ಐಎಂಎ ಹಗರಣದಲ್ಲಿ 40,000 ಹೂಡಿಕೆದಾರರನ್ನು ಕಂಪನಿ ಸಂಸ್ಥಾಪಕ ಮೊಹಮ್ಮದ್ ಮನ್ಸೂರ್ ಖಾನ್ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮನ್ಸೂರ್‌ನಿಂದ ಜಮೀರ್ ಅಕ್ರಮವಾಗಿ ವಹಿವಾಟು ನಡೆಸಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ.

ಕೆಲವು ರಾಜಕಾರಣಿಗಳು ಮತ್ತು ಗೂಂಡಾಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಆಡಿಯೋ ಸಂದೇಶವನ್ನು ಬಿಟ್ಟು ಆರೋಪಿ ಮನ್ಸೂರ್ ದೇಶದಿಂದ ಪಲಾಯನ ಮಾಡಿದ ನಂತರ ಹಗರಣವು ಜೂನ್ 2019 ರಲ್ಲಿ ಬೆಳಕಿಗೆ ಬಂದಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!