ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಮರುಳುಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಮಗ ಅವಾಚ್ಯ ಶಬ್ದಗಳಿಂದ ಬೈದರಿರುವ ವಿಡಿಯೋ ವೈರಲ್ ಆಗಿದೆ.
ಭದ್ರಾವತಿ ಭದ್ರಾ ನದಿತಟದಲ್ಲಿ ನಡೆಯುತ್ತಿದ್ದ ಅಕ್ರಮ ಮರುಳು ಗಣಿಗಾರಿಕೆ ಮೇಲೆ ಗಣಿ ಇಲಾಖೆಯ ಮಹಿಳಾ ವಿಜ್ಞಾನಿ ಸೋಮವಾರ ಮಧ್ಯರಾತ್ರಿ ದಾಳಿ ಮಾಡಿದ್ದರು.
ಈ ವೇಳೆ ಶಾಸಕ ಬಿಕೆ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ದೂರವಾಣಿ ಕರೆಯಲ್ಲಿ ಕೆಟ್ಟ ಪದಗಳನ್ನು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಬೈದಿರುವ ವಿಡಿಯೋ ವೈರಲ್ ಆಗಿದೆ.