ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ರಾಜ್ಯಗಳ ಸಂಸದರಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪಹಾರ ಕೂಟ ಸಭೆಗೆ ಕಾಂಗ್ರೆಸ್ ಶಾಸಕರು ಗೈರಾಗಿದ್ದಾರೆ.
ಪ್ರಧಾನಿ ಮೋದಿ ಉಪಸ್ಥಿತಿರಿದ್ದ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಾಗಿಲ್ಲ. ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಕೆಲವು ಈಶಾನ್ಯ ರಾಜ್ಯಗಳ ಸಂಸದರಿಗೆ ರಾಷ್ಟ್ರಪತಿಗಳು ಆತಿಥ್ಯ ನೀಡಿದ್ದರು.
ಆದರೆ ಸೋನಿಯಾ ಗಾಂಧಿ ಸೇರಿದಂತೆ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಕಾಂಗ್ರೆಸ್ ಸಂಸದರು ಹಾಜರಾಗಿಲ್ಲ. ಸೋನಿಯಾ ಗಾಂಧಿ ಉತ್ತರ ಪ್ರದೇಶದಿಂದ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸಂಸದರಾಗಿದ್ದರೆ, ವಿರೋಧ ಪಕ್ಷದ ಆರು ರಾಜ್ಯಸಭಾ ಸಂಸದರನ್ನು ಹೊಂದಿದೆ. ಆದರೆ ಯಾರೂ ಹಾಜರಾಗಿಲ್ಲ.