ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ನಿಧನ: ಭಾರತ್​ ಜೋಡೋ ಯಾತ್ರೆ 24 ಗಂಟೆಗಳ ಕಾಲ ಸ್ಥಗಿತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ್​ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್​​​​​ ಸಿಂಗ್(77)​ ಹೃದಯಾಘಾತದಿಂದ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಯಾತ್ರೆಯನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ.

ಮೃತ ಸಂಸದನಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

ಅದೇ ರೀತಿ ಜ.15 ರಂದು ಜಲಂಧರ್ ನಲ್ಲಿ ನಡೆಯಬೇಕಿದ್ದ ಪತ್ರಿಕಾಗೋಷ್ಠಿಯನ್ನೂ ರಾಹುಲ್ ಗಾಂಧಿ ಮುಂದೂಡಿದ್ದಾರೆ. ಪತ್ರಿಕಾಗೋಷ್ಠಿ ಜಲಂಧರ್ ಬದಲು ಜ.17 ರಂದು ಹೋಶಿಯಾರ್ ಪುರದಲ್ಲಿ ನಡೆಯಲಿದೆ.

ನಾಳೆ ಮಧ್ಯಾಹ್ನ ಜಲಂಧರ್ ನ ಖಾಲ್ಸಾ ಕಾಲೇಜ್ ಮೈದಾನದಿಂದ ಪುನಾರಂಭಗೊಳ್ಳಲಿದೆ ಎಂದು ಎಐಸಿಸಿ ಪ್ರಧಾನ ಕಾರಯ್ದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!