ಪ್ರಧಾನಿ ಮೋದಿ ದೇಶದ ಶಕ್ತಿ, ಚೈತನ್ಯ: ಮತ್ತೊಮ್ಮೆ ಶ್ಲಾಘಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೊಮ್ಮೆ ಹೊಗಳುವ ಮೂಲಕ ಗಮನ ಸೆಳೆದಿದ್ದಾರೆ.

ಪ್ರಮುಖ ಇಂಗ್ಲಿಷ್ ಪತ್ರಿಕೆಯಲ್ಲಿ ಪ್ರಕಟವಾದ ಅಂಕಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. ಮೋದಿಯವರ ಶಕ್ತಿ, ಚೈತನ್ಯ ಮತ್ತು ತೊಡಗಿಸಿಕೊಳ್ಳುವ ಇಚ್ಛೆಯನ್ನು ಶಶಿ ತರೂರ್ ಶ್ಲಾಘಿಸಿದ್ದಾರೆ. ಈ ಗುಣಗಳು ವಿಶ್ವ ವೇದಿಕೆಯಲ್ಲಿ ಭಾರತಕ್ಕೆ ಬಲವಾದ ಪ್ರಯೋಜನವನ್ನು ನೀಡುತ್ತವೆ ಎಂದು ಹೇಳಿದ್ದಾರೆ. ‘ವಿಶ್ವ ವೇದಿಕೆಯಲ್ಲಿ ಭಾರತದ ಪತಾಕೆ ಹಾರಿಸಲು ಮೋದಿ ಅವರಿಗೆ ಹೆಚ್ಚಿನ ಬೆಂಬಲ ಬೇಕು’ ಎಂದು ತರೂರ್ ಬರೆದಿದ್ದಾರೆ.

ಈ ಹಿಂದೆ ಮೋದಿ ಕಳುಹಿಸಿದ್ದ ಸಂಸದರ ನಿಯೋಗದ ಭಾಗವಾಗಿದ್ದ ಶಶಿ ತರೂರ್ ವಿದೇಶಗಳಲ್ಲಿ ಬಿಜೆಪಿ ಸರ್ಕಾರವನ್ನು ಶ್ಲಾಘಿಸಿದ್ದಕ್ಕಾಗಿ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬಳಿಕ ಶಶಿ ತರೂರ್ ಕೂಡ ಕಾಂಗ್ರೆಸ್ ಜೊತೆ ಭಿನ್ನಾಭಿಪ್ರಾಯಗಳಿರುವುದು ನಿಜ, ಆದರೆ ಅದನ್ನು ಬಹಿರಂಗವಾಗಿ ಚರ್ಚಿಸಲು ಇಷ್ಟವಿಲ್ಲ ಎಂದಿದ್ದರು. ಅದರ ಬೆನ್ನಲ್ಲೇ ಮತ್ತೊಮ್ಮೆ ಅವರು ಮೋದಿಯನ್ನು ಹೊಗಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!