ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆಗಾಗಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮೈತ್ರಿಕೂಟ ಪ್ರಕಟಿಸಿದ ಪ್ರಣಾಳಿಕೆ ಕಂಡು ಪಾಕಿಸ್ತಾನ ಖುಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕತ್ರಾದಲ್ಲಿ ಗುರುವಾರ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಮೋದಿ ಅವರು, ಕಾಂಗ್ರೆಸ್- ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಗೆ ಪಾಕಿಸ್ತಾನದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅವರ ಪ್ರಣಾಳಿಕೆ ಕಂಡು ಪಾಕಿಸ್ತಾನಕ್ಕೆ ಸಂತೋಷವಾಗಿದೆ, ಬಹಿರಂಗವಾಗಿಯೇ ಅವರನ್ನು ಬೆಂಬಲಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯ ಮರುಸ್ಥಾಪನೆ ವಿಚಾರದಲ್ಲಿ ಪಾಕಿಸ್ತಾನದ ಶೆಹಬಾಜ್ ಷರೀಪ್ ಸರ್ಕಾರ ಹಾಗೂ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಒಂದೇ ಪುಟದಲ್ಲಿವೆ ಎಂದು ಕಿಡಿಕಾರಿದರು.
ಜಿಯೋ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟವು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಹೆಚ್ಚಿನ ಅವಕಾಶ ಇದೆ ಎಂದು ಹೇಳಿದ್ದರು.